ADVERTISEMENT

ಎಸ್‌ಸಿ, ಎಸ್‌ಟಿ ಹಾಸ್ಟೆಲ್‌ಗಳಿಗೆ ಇನ್ನು ಮುಂದೆ ಅಂಬೇಡ್ಕರ್‌ ಹೆಸರು: ಆದಿತ್ಯನಾಥ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 15:04 IST
Last Updated 5 ಮಾರ್ಚ್ 2025, 15:04 IST
ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ   

ಲಖನೌ (ಉತ್ತರ ಪ್ರದೇಶ): ರಾಜ್ಯದಲ್ಲಿನ ಎಲ್ಲ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿದ ವಿದ್ಯಾರ್ಥಿ ನಿಲಯಗಳಿಗೆ ‘ಬಾಬಾ ಸಾಹೇಬ್‌ ಅಂಬೇಡ್ಕರ್‌’ ಅವರ ಹೆಸರಿಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಚರ್ಚೆಯ ಸಂದರ್ಭದಲ್ಲಿ ಮಾತಾನಾಡಿದ ಆದಿತ್ಯನಾಥ ಅವರು, ‘ಸಂವಿಧಾನವನ್ನು ರಕ್ಷಿಸುವುದಾಗಿ ಹೇಳಿದ್ದ ವಿರೋಧ ಪಕ್ಷವು, ಅಂಬೇಡ್ಕರ್ ಮತ್ತು ಇತರ ದಲಿತ ಮತ್ತು ಹಿಂದುಳಿದ ನಾಯಕರನ್ನು ಗೌರವಿಸಲು ವಿಫಲವಾಗಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT