ADVERTISEMENT

ಇಂಡಿಯಾ ಮೈತ್ರಿಕೂಟದಲ್ಲಿ ಪರಿಸ್ಥಿತಿ ಸರಿಯಿಲ್ಲ: ಒಮರ್‌ ಅಬ್ದುಲ್ಲಾ

ಪಿಟಿಐ
Published 30 ಅಕ್ಟೋಬರ್ 2023, 16:23 IST
Last Updated 30 ಅಕ್ಟೋಬರ್ 2023, 16:23 IST
<div class="paragraphs"><p>ಒಮರ್‌ ಅಬ್ದುಲ್ಲಾ </p></div>

ಒಮರ್‌ ಅಬ್ದುಲ್ಲಾ

   

–ಪಿಟಿಐ ಚಿತ್ರ

ಶ್ರೀನಗರ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿರುವ ಮಧ್ಯೆಯೇ, ‘ಇಂಡಿಯಾ ಮೈತ್ರಿಕೂಟದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ’ ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ನಾಯಕ ಒಮರ್‌ ಅಬ್ದುಲ್ಲಾ ಹೇಳಿದ್ದಾರೆ.

ADVERTISEMENT

‘ಕೆಲವು ಆಂತರಿಕ ಭಿನ್ನಾಭಿಪ್ರಾಯಗಳು ಇಂಡಿಯಾ ಮೈತ್ರಿಕೂಟದಲ್ಲಿ ಇವೆ. ಇಂಥದ್ದು ಮೈತ್ರಿಕೂಟದಲ್ಲಿ ನಡೆಯಬಾರದಿತ್ತು. ಆದರೆ, ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಹೇಗೆ ಜಗಳವಾಡುತ್ತಿವೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಉತ್ತರಪ್ರದೇಶದ ಎಲ್ಲ ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ ಎಂದು ಎರಡೂ ಪಕ್ಷಗಳು ಹೇಳುತ್ತಿವೆ. ಇಂಥ ಬೆಳವಣಿಗೆ ಮೈತ್ರಿಕೂಟಕ್ಕೆ ಒಳ್ಳೆಯದಲ್ಲ. ಈ ಚುನಾವಣೆ ಬಳಿಕ ಬಹುಶಃ ನಾವೆಲ್ಲ ಮತ್ತೆ ಭೇಟಿಯಾಗಿ, ಒಂದಾಗಿ ಕೆಲಸ ಮಾಡಬಹುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.