ADVERTISEMENT

ಕರ್ನಾಟಕ ಹೈಕೋರ್ಟ್‌ನ ಇಬ್ಬರು ಸೇರಿ 9 ಸುಪ್ರೀಂ ನ್ಯಾಯಮೂರ್ತಿಗಳ ನೇಮಕಕ್ಕೆ ಅಸ್ತು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಆಗಸ್ಟ್ 2021, 4:56 IST
Last Updated 26 ಆಗಸ್ಟ್ 2021, 4:56 IST
ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಚಿತ್ರ ಕೃ‍ಪೆ: ಕರ್ನಾಟಕ ಜುಡಿಶಿಯರಿ ವೆಬ್‌ಸೈಟ್‌
ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಚಿತ್ರ ಕೃ‍ಪೆ: ಕರ್ನಾಟಕ ಜುಡಿಶಿಯರಿ ವೆಬ್‌ಸೈಟ್‌   

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲುಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲಾ 9 ಹೆಸರುಗಳಿಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಇದರಲ್ಲಿ, ಕರ್ನಾಟಕ ಹೈಕೋರ್ಟ್‌ನ ಇಬ್ಬರು ಸೇರಿ ಒಟ್ಟು 8 ನ್ಯಾಯಮೂರ್ತಿಗಳು ಮತ್ತು ಒಬ್ಬರು ವಕೀಲರು ಸೇರಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ , ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಎಂ.ಎಂ.ಸುಂದ್ರೇಶ್, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ, ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಮಹೇಶ್ವರಿ, ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿತ್ತು.

ADVERTISEMENT

ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ನರಸಿಂಹ ಅವರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿತ್ತು. ನರಸಿಂಹ ಅವರು ವಕೀಲರಿಂದಲೇ ನೇರವಾಗಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾದ ಆರನೇ ವ್ಯಕ್ತಿ ಎನಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.