ಪ್ರಧಾನಿ ನರೇಂದ್ರ ಮೋದಿ
ಪಿಟಿಐ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಜನರು ತಮ್ಮ ತೀರ್ಪುನ್ನು ನೀಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ದೇಶಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮೋದಿ, ‘ಇದು ಅಮೃತ ಕಾಲದ ಪ್ರಮುಖ ಬಜೆಟ್ ಆಗಿದ್ದು, ಮುಂದಿನ ಐದು ವರ್ಷಗಳ ಪ್ರಯಾಣದ ದಿಕ್ಕನ್ನು ಇದು ನಿರ್ಧರಿಸುತ್ತದೆ. ಅಲ್ಲದೇ 'ವಿಕಸಿತ ಭಾರತ' ಕನಸನ್ನು ನನಸಾಗಿಸಲು ಅಡಿಪಾಯ ಹಾಕುತ್ತದೆ’ ಎಂದು ಹೇಳಿದರು.
‘60 ವರ್ಷಗಳ ನಂತರ ಮತ್ತೆ ಮೂರನೇ ಅವಧಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜನರಿಗೆ ನೀಡಿದ ಆಶೋತ್ತರಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಮುಂದಾಗಿದೆ’ ಎಂದು ಹೇಳಿದರು.
ಇದೇ ವೇಳೆ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿಪಕ್ಷಗಳು ಸಂಸತ್ತಿನ ಸಮಯವನ್ನು ಬಳಸಿಕೊಳುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.