ಶಾಲೆಗಳಿಗೆ ರಜೆ ಘೋಷಣೆ
Credit: iStock Photo
ಲೇಹ್/ಜಮ್ಮು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಲೇಹ್‌ನ ಎಲ್ಲಾ ಶಾಲೆ, ಕಾಲೇಜುಗಳಿಗೆ ಮೇ 9 ಮತ್ತು 10ರಂದು ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲೇಹ್ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮುಂದಿನ ಎರಡು ದಿನ ರಜೆ ಘೋಷಿಸಲಾಗಿದೆ ಎಂದು ಲೇಹ್‌ನ ಉಪ ಆಯುಕ್ತ ಸಂತೋಷ್ ಸುಖದೇವ ತಿಳಿಸಿದ್ದಾರೆ.
ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ 112 ಸಂಖ್ಯೆಗೆ ಕರೆ ಮಾಡುವಂತೆ ಸಂತೋಷ್ ಸುಖದೇವ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.
‘ದೇಶದ ಪಶ್ಚಿಮ ಭಾಗದಲ್ಲಿರುವ ಭಾರತೀಯ ವಾಯುಪಡೆಯ 13 ಸೇರಿದಂತೆ ಒಟ್ಟು 15 ಸೇನಾ ನೆಲೆಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿ ಧ್ವಂಸಗೊಳಿಸುವ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸಶಸ್ತ್ರ ಪಡೆಗಳು ವಿಫಲಗೊಳಿಸಿವೆ. ಪಾಕ್ ಕ್ರಿಯೆಗೆ ಪ್ರತಿ ದಾಳಿಯ ಮೂಲಕ ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಗೊಳಿಸಲಾಗಿದೆ’ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.