ADVERTISEMENT

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ: ಯಾರಿವರು?

ಡೆಕ್ಕನ್ ಹೆರಾಲ್ಡ್
Published 18 ಫೆಬ್ರುವರಿ 2025, 7:27 IST
Last Updated 18 ಫೆಬ್ರುವರಿ 2025, 7:27 IST
<div class="paragraphs"><p>ಜ್ಞಾನೇಶ್ ಕುಮಾರ್</p></div>

ಜ್ಞಾನೇಶ್ ಕುಮಾರ್

   

(ಪಿಟಿಐ ಚಿತ್ರ)

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ನೇಮಕ ಮಾಡಲಾಗಿದೆ. ಕುಮಾರ್‌ ಅವರು ಚುನಾವಣಾ ಆಯೋಗದ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ರೂಪಿಸಲಾಗಿರುವ ಹೊಸ ಕಾಯ್ದೆಗೆ ಅನುಗುಣವಾಗಿ ನೇಮಕ ಆಗಿರುವ ಮೊದಲ ಸಿಇಸಿ.

ADVERTISEMENT

ಜ್ಞಾನೇಶ್ ಕುಮಾರ್ ಯಾರು?

  • ಜ್ಞಾನೇಶ್ ಕುಮಾರ್ ಅವರು 1988ನೇ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್‌ ಅಧಿಕಾರಿ.

  • ಅವರು ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಅಲ್ಲದೇ ಕೇರಳ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಯಾಗಿಯೂ ಅವರು ಕೆಲಸ ನಿರ್ವಹಿಸಿದ್ದಾರೆ.

  • ರಕ್ಷಣಾ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ, ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಕಾರ್ಯದರ್ಶಿಯಾಗಿ, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ, ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

  • ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸುವ ತೀರ್ಮಾನವನ್ನು ಅನುಷ್ಠಾನಕ್ಕೆ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

  • 2024ರ ಮಾರ್ಚ್‌ 15ರಂದು ಇವರನ್ನು ಚುನಾವಣಾ ಆಯುಕ್ತರನ್ನಾಗಿ (ಇಸಿ) ನೇಮಿಸಲಾಗಿತ್ತು.

  • 26ನೆಯ ಸಿಇಸಿ ಆಗಿರುವ ಜ್ಞಾನೇಶ್ ಕುಮಾರ್ ಅವರು ಈ ವರ್ಷ ಬಿಹಾರ ವಿಧಾನಸಭಾ ಚುನಾವಣೆ, ಮುಂದಿನ ವರ್ಷ(2026) ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಅದೇ ವರ್ಷ(2026) ತಮಿಳು ನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಕೂಡ ನಡೆಯಲಿವೆ.

  • ಇವರ ಅಧಿಕಾರಾವಧಿ 2029ರ ಜನವರಿ 26ರವರೆಗೆ ಇರಲಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.