ADVERTISEMENT

ಅಕ್ರಮ ಶಸ್ತ್ರಾಸ್ತ್ರ ಖರೀದಿ: ಅಬ್ಬಾಸ್‌ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಪಿಟಿಐ
Published 29 ಆಗಸ್ಟ್ 2022, 13:00 IST
Last Updated 29 ಆಗಸ್ಟ್ 2022, 13:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಅಕ್ರಮ ಶಸ್ತ್ರಾಸ್ತ್ರ ಖರೀದಿ ಪ್ರಕರಣದಲ್ಲಿ ಜೈಲು ಸೇರಿರುವ ರಾಜಕಾರಣಿ ಮುಕ್ತಾರ್ ಅನ್ಸಾರಿ ಅವರ ಪುತ್ರ ಶಾಸಕ ಅಬ್ಬಾಸ್‌ ಅನ್ಸಾರಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಸೋಮವಾರ ತಿರಸ್ಕರಿಸಿದೆ.

ನಿರೀಕ್ಷಾ ಜಾಮೀನು ಅರ್ಜಿ ತಿರಸ್ಕರಿಸಿರುವ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಪೀಠ, ಆರೋಪಿ ವಿರುದ್ಧದ ಆರೋಪ ಗಂಭೀರ ಸ್ವರೂಪವಾಗಿದ್ದು ಮತ್ತು ಆತ ತಲೆಮರೆಸಿಕೊಂಡಿದ್ದಾನೆ ಎಂದು ಘೋಷಿಸಲಾಗಿದೆ ಎಂದು ಹೇಳಿದೆ.

ಸಂಬಂಧಪಟ್ಟ ನ್ಯಾಯಾಲಯದ ಎದುರು ಶರಣಾವಾಗುವಂತೆ ಅಬ್ಬಾಸ್ ಅನ್ಸಾರಿಗೆ ಸೂಚಿಸಿರುವ ಕೋರ್ಟ್‌, ಅವರ ಮನವಿಯನ್ನು ತ್ವರಿತವಾಗಿ ತೀರ್ಮಾನಿಸಲಿದೆ ಎಂದು ತಿಳಿಸಿದೆ.

ADVERTISEMENT

ಅಬ್ಬಾಸ್‌ ಬಂಧನಕ್ಕೆ ಎಂಟು ಪೊಲೀಸ್‌ ತಂಡಗಳನ್ನು ರಚಿಸಲಾಗಿದ್ದು, ದೆಹಲಿ, ಲಖನೌ, ಮಿರ್ಜಾಪುರ, ಗಾಜಿಪುರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.