
ಅಲಹಾಬಾದ್ ಹೈಕೋರ್ಟ್
ಪ್ರಯಾಗರಾಜ್: ‘ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಾಗ ತನಿಖಾ ಸಂಸ್ಥೆಗಳು ಮತ್ತು ಬ್ಯಾಂಕ್‌ಗಳು ಅಧಿಕಾರವನ್ನು ವಿವೇಚನೆಯಿಂದ ಬಳಸಬೇಕು’ ಎಂದು ಅಲಹಾಬಾದ್ ಹೈಕೋರ್ಟ್, ಪ್ರಕರಣವೊಂದರ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ.
‘ಖಾತೆಗಳನ್ನು ಸ್ಥಗಿತಗೊಳಿಸುತ್ತಿರುವ ಬಗ್ಗೆ ಬ್ಯಾಂಕ್‌ಗಳು ಖಾತೆದಾರರಿಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎನ್ನುವುದು ಪೀಠದ ಗಮನಕ್ಕೆಬಂದಿದೆ. ಬ್ಯಾಂಕ್ ಖಾತೆ ಸ್ಥಗಿತಗೊಳಿಸುವ ವಿಚಾರದಲ್ಲಿ ದುರಾಡಳಿತಕ್ಕೆ ಅಥವಾ ತಾರತಮ್ಯಕ್ಕೆ ಅವಕಾಶ ಇಲ್ಲ. ಖಾತೆದಾರರು ಕಟ್ಟುಪಟ್ಟು ಸಂಪಾದಿಸಿದ ಹಣ ಮತ್ತು ಅವರ ವಿಶ್ವಾಸ ಮುಖ್ಯ’ ಎಂದು ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ವಿಭಾಗೀಯ ನ್ಯಾಯಪೀಠ ಹೇಳಿತು.
ತಾರಕೇಶ್ವರ ತಿವಾರಿ ಎಂಬ ವ್ಯಕ್ತಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.