ADVERTISEMENT

ಭಯೋತ್ಪಾದನೆ ಆರೋಪದಲ್ಲಿ ಜೈಲು ಸೇರಿದ್ದ ಆರೋಪಿಯಿಂದ ಕೋವಿಡ್‌ ಚಿಕಿತ್ಸೆಗೆ ಅರ್ಜಿ

ಪಿಟಿಐ
Published 23 ಜೂನ್ 2020, 12:56 IST
Last Updated 23 ಜೂನ್ 2020, 12:56 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸಿದ ಮತ್ತು ದೇಶದಲ್ಲಿ ಐಎಸ್‌ ಉಗ್ರ ಸಂಘಟನೆಯ ಸಿದ್ಧಾಂತವನ್ನು ಪಸರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆರೋಪಿಯೊಬ್ಬ, ತನಗೆ ಕೋವಿಡ್‌–19 ರೋಗಲಕ್ಷಣ ಕಂಡುಬಂದಿದ್ದು, ಸೂಕ್ತ ಚಿಕಿತ್ಸೆ ಸೌಲಭ್ಯ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ.

ತಿಹಾರ್‌ ಜೈಲಿನಲ್ಲಿರುವ 18 ಮಂದಿ ಕೈದಿಗಳಲ್ಲೂ ಈ ರೋಗದ ಲಕ್ಷಣಗಳು ಕಂಡುಬಂದಿವೆ. ಆದ್ದರಿಂದ ಜೈಲಿನಲ್ಲಿ ಅಥವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಆರೋಪಿ ಆಸಿಫ್‌ ಅಲಿ ಅರ್ಜಿಯಲ್ಲಿ ತಿಳಿಸಿದ್ದಾನೆ.

ಆರೋಪಿ ಪರ ವಕೀಲ ಎಂ.ಎಸ್‌.ಖಾನ್‌ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ.

ADVERTISEMENT

ರಾಷ್ಟ್ರೀಯ ತನಿಖಾ ಸಂಸ್ಥೆ 2015ರ ಡಿಸೆಂಬರ್‌ನಲ್ಲಿ ಅಲಿಯನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.