ನವದೆಹಲಿ: ವಕ್ಫ್ ಮಂಡಳಿ ನೇಮಕಾತಿ ಹಗರಣ ಸಂಬಂಧಿಸಿದಂತೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳವು ಶುಕ್ರವಾರ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಿದೆ.
ಈ ವಿಚಾರವಾಗಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಅಮಾನತುಲ್ಲಾ ಖಾನ್ ಬಂಧನವು ಆಪರೇಷನ್ ಕಮಲದ ಭಾಗವಾಗಿದೆ’ ಎಂದು ಆರೋಪಿಸಿದ್ದಾರೆ.
‘ಗುಜರಾತ್‌ನಲ್ಲಿ ಅವರು(ಬಿಜೆಪಿ) ತುಂಬಾ ಬಳಲುತ್ತಿರುವಂತೆ ತೋರುತ್ತಿದೆ. ಮುಂಬರುವ ದಿನಗಳಲ್ಲಿ ನಮ್ಮ ಪಕ್ಷದ ಹೆಚ್ಚಿನ ಶಾಸಕರನ್ನು ಬಂಧಿಸುವ ನಿರೀಕ್ಷೆಯಿದೆ’ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
‘ಮೊದಲು, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದರು. ನ್ಯಾಯಾಲಯವು ಪದೇ ಪದೇ ಕೇಳಿದರೂ ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲು ಅವರಿಗೆ(ಬಿಜೆಪಿ) ಸಾಧ್ಯವಾಗುತ್ತಿಲ್ಲ. ನಂತರ, ಮನೀಶ್ ಸಿಸೋಡಿಯಾ ನಿವಾಸದ ಮೇಲೆ ದಾಳಿ ನಡೆಸಲಾಯಿತು. ಅಲ್ಲಿ ಏನೂ ಕಂಡುಬಂದಿಲ್ಲ. ಈಗ, ಅಮಾನತುಲ್ಲಾ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ಶಾಸಕರನ್ನು ಬಂಧಿಸುವ ನಿರೀಕ್ಷೆಯೂ ಇದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.