ADVERTISEMENT

ಅಮರಾವತಿಗಿಲ್ಲ ಏಕೈಕ ರಾಜಧಾನಿ ಸ್ಥಾನಮಾನ: ಹೊರಬಿತ್ತು ಜಗನ್ ಸರ್ಕಾರದ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 7:14 IST
Last Updated 20 ಜನವರಿ 2020, 7:14 IST
ಜಗನ್‌ ಮೋಹನ್‌ ರೆಡ್ಡಿ
ಜಗನ್‌ ಮೋಹನ್‌ ರೆಡ್ಡಿ   

ಆಂಧ್ರ ಪ್ರದೇಶ: ಆಂಧ್ರ ಪ್ರದೇಶದ ರಾಜಧಾನಿಯಾಗಿ ಅಮರಾವತಿಯನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಸರ್ಕಾರ ಕೈಬಿಟ್ಟಿದೆ.

ಜಗನ್‌ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿಆಂಧ್ರ ಪ್ರದೇಶರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ರಾಜಧಾನಿ ಕುರಿತುಇನ್ನೂಯಾವುದೇ ಘೋಷಣೆಯಾಗಿಲ್ಲ.

ಗುಂಟೂರು ಜಿಲ್ಲೆಯಲ್ಲಿ, ಕೃಷ್ಣಾ ನದಿಯ ದಂಡೆಯಲ್ಲಿ 33 ಸಾವಿರ ಎಕರೆ ಪ್ರದೇಶದಲ್ಲಿ ಹೊಸ ರಾಜಧಾನಿ ನಿರ್ಮಿಸುವ ಯೋಜನೆಯನ್ನು ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈಗೆತ್ತಿಕೊಂಡಿದ್ದರು. ಆದರೆ, ಈಗಿನ ಮುಖ್ಯಮಂತ್ರಿ ಜಗನ್‌ ಅವರು, ಅಮರಾವತಿ ತಮ್ಮ ಆದ್ಯತೆ ಅಲ್ಲ ಎಂದು ಈ ಹಿಂದೆ ಹೇಳಿದ್ದರು.

ADVERTISEMENT

ಬಜೆಟ್‌ನಲ್ಲಿ ಯೋಜನೆಗೆ ₹500 ಕೋಟಿ ಮಾತ್ರ ಮೀಸಲು ಇಟ್ಟು, ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಇಲ್ಲ ಎಂಬ ಸಂದೇಶರವಾನಿಸಿದ್ದರು.

ರಾಜಧಾನಿ ಅಭಿವೃದ್ಧಿಗೆ ಸಂಬಂಧಿಸಿ ಸರ್ಕಾರದ ನೀತಿ ಏನು ಎಂಬುದು ಸದ್ಯವೇ ಪ್ರಕಟವಾಗಲಿದೆ ಎಂದು ಪಂಚಾಯಿತಿರಾಜ್‌ ಸಚಿವ ಬೊಚ್ಚ ಸತ್ಯನಾರಾಯಣ ಆಗಸ್ಟ್‌ನಲ್ಲಿ ಹೇಳಿದ್ದರು.

‘ನದಿಯ ದಂಡೆಯಲ್ಲಿ ರಾಜಧಾನಿಯನ್ನು ಕಟ್ಟುವುದರಲ್ಲಿ ಹಲವು ಸಮಸ್ಯೆಗಳಿವೆ. ನಾಯ್ಡು ಅವರು ಆಯ್ಕೆ ಮಾಡಿಕೊಂಡ ಸ್ಥಳ ರಾಜಧಾನಿಗೆ ಸೂಕ್ತವಲ್ಲ ಎಂಬುದನ್ನು ಇತ್ತೀಚಿನ ಪ್ರವಾಹ ತೋರಿಸಿಕೊಟ್ಟಿದೆ. ಪ್ರವಾಹದ ನಿರ್ವಹಣೆಗಾಗಿ ಪ್ರತ್ಯೇಕ ಕಾಲುವೆಗಳು ಮತ್ತು ಚರಂಡಿ ವ್ಯವಸ್ಥೆ ಮಾಡಬೇಕಾಗುತ್ತದೆ’ ಎಂದೂ ತಿಳಿಸಿದ್ದರು.

‘ಇಂತಹ ಸ್ಥಳದಲ್ಲಿ ರಾಜಧಾನಿ ಕಟ್ಟುವುದು ಬೊಕ್ಕಸಕ್ಕೆ ಅನಗತ್ಯ ಹೊರೆ ಉಂಟು ಮಾಡುತ್ತದೆ. ಪ್ರಕಾಶಂ ಜಿಲ್ಲೆಯ ದೊನಕೊಂಡವನ್ನು ರಾಜಧಾನಿಗಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಎಂಬ ಸುಳಿವನ್ನು ಅವರು ಕೊಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.