ADVERTISEMENT

ಟಿಡಿಪಿ ಮುಖಂಡರ ಬಂಧನ ಖಂಡಿಸಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 7:18 IST
Last Updated 16 ಜೂನ್ 2020, 7:18 IST
ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಶಾಸಕರು ಪ್ರತಿಭಟನೆ ನಡೆಸಿದರು. (ಎಎನ್‌ಐ ಟ್ವಿಟರ್‌ ಚಿತ್ರ)
ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಶಾಸಕರು ಪ್ರತಿಭಟನೆ ನಡೆಸಿದರು. (ಎಎನ್‌ಐ ಟ್ವಿಟರ್‌ ಚಿತ್ರ)   

ಅಮರಾವತಿ: ಮಾಜಿ ಸಚಿವ, ಟಿಡಿಪಿ ಮುಖಂಡ ಕೆ.ಅಚ್ಚನ್ನಾಯ್ಡು ಸೇರಿದಂತೆ ಪಕ್ಷದ ಮುಖಂಡರನ್ನು ಬಂಧಿಸಿರುವ ಸರ್ಕಾರದ ಕ್ರಮಖಂಡಿಸಿ ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಶಾಸಕರುಪ್ರತಿಭಟನೆ ನಡೆಸಿದರು.

ಮಂಗಳವಾರವಿಧಾನಸಭೆಗೆ ತೆರಳುವ ಮುನ್ನ ಟಿಡಿಪಿ ಪಕ್ಷದ ಸಂಸ್ಥಾಪಕ ಎನ್‌.ಟಿ.ರಾಮರಾವ್‌ ಪುತ್ಥಳಿಗೆ ಗೌರವ ಸಲ್ಲಿಸಿದರು. ಬಳಿಕ ಪಕ್ಷದ ಮೂಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ಇಎಸ್‌ಐ ವೈದ್ಯಕೀಯ ಪರಿಕರಗಳ ಖರೀದಿ ಕುರಿತ₹ 150 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಟಿಡಿಪಿ ಮುಖಂಡ ಕೆ.ಅಚ್ಚನ್ನಾಯ್ಡು ಮತ್ತು ಇತರ ಐವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂನ್‌ 12 ರಂದು (ಶುಕ್ರವಾರ) ಬಂಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.