ADVERTISEMENT

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರನ್ನು ಭೇಟಿಯಾದ ಅಮರಿಂದರ್ ಸಿಂಗ್

ಪಿಟಿಐ
Published 30 ಸೆಪ್ಟೆಂಬರ್ 2021, 12:18 IST
Last Updated 30 ಸೆಪ್ಟೆಂಬರ್ 2021, 12:18 IST
ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್   

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರನ್ನು ಭೇಟಿಯಾಗಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಮುಂದಿನ ನಡೆ ಬಗ್ಗೆ ಊಹಾಪೋಹಗಳ ನಡುವೆ ನಿನ್ನೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಸಿಂಗ್, ಇಂದು ಎನ್ಎಸ್ಎ ಅಜಿತ್ ಡೊಭಾಲ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಎಡೆಮಾಡಿದೆ.

ಡೊಭಾಲ್ ಅವರ ನಿವಾಸದಲ್ಲಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆದಿದೆ. ಸಭೆಯ ನಂತರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ನೇರ ಅಮಿತ್ ಶಾನಿವಾಸಕ್ಕೆ ತೆರಳಿದ್ದಾರೆ.

ADVERTISEMENT

ಪಕ್ಷದಲ್ಲಿ ತನಗೆ ಅಪಮಾನವಾಗಿದೆ ಎಂದು ಹೇಳಿ, ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅವರು, ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪಂಜಾಬ್ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಕ್ಕೆ ಎಡೆಮಾಡಿತ್ತು. ಆದರೆ, ಇಂದು ಅವರು ಬಿಜೆಪಿ ಪಕ್ಷ ಸೇರುವುದಿಲ್ಲ. ಕಾಂಗ್ರೆಸ್ ಪಕ್ಷ ತೊರೆಯುತ್ತೇನೆ ಎಂದು ಖಚಿತಪಡಿಸಿದ್ದಾರೆ.

ಅಮಿತ್ ಶಾ ಮತ್ತು ಅಜಿತ್ ಡೊಭಾಲ್ ಭೇಟಿ ವೇಳೆ ಅಮರಿಂದರ್ ಸಿಂಗ್ ಅವರು, ಪಂಜಾಬ್‌ನ ಆಂತರಿಕ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಸಿಂಗ್ ಅವರ ಆಪ್ತ ಮೂಲಗಳು ತಿಳಿಸಿವೆ.

'ನವಜೋತ್‌ ಸಿಂಗ್‌ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿʼಎಂದು ರಾಜೀನಾಮೆ ಬಳಿಕ ಅಮರಿಂದರ್ ಸಿಂಗ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.