ADVERTISEMENT

ಕುಲ್ಗಾಮ್ ಬಳಿ ಬಸ್ ಅಪಘಾತ: 10ಕ್ಕೂ ಅಧಿಕ ಅಮರನಾಥ ಯಾತ್ರಿಕರಿಗೆ ಗಾಯ

ಪಿಟಿಐ
Published 13 ಜುಲೈ 2025, 9:00 IST
Last Updated 13 ಜುಲೈ 2025, 9:00 IST
   

ಶ್ರೀನಗರ: ಅಮರನಾಥ ಯಾತ್ರೆಗಾಗಿ ಕುಲ್ಗಾಮ್ ಬಳಿಯ ಬೇಸ್ ಕ್ಯಾಂಪ್‌ಗೆ ತೆರಳುವ ವೇಳೆ ಭಾನುವಾರ ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಮೂರು ಬಸ್‌ಗಳು ಹಾನಿಗೊಳಗಾಗಿವೆ. ಗಾಯಗೊಂಡ ಯಾತ್ರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಬಸ್‌ನಲ್ಲಿದ್ದ ಉಳಿದ ಯಾತ್ರಿಕರಿಗೆ ಮೀಸಲು ಬಸ್‌ ವ್ಯವಸ್ಥೆ ಮಾಡಿದ್ದು, ಅವರು ಯಾತ್ರೆ ಮುಂದುವರೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.