ಜಮ್ಮು: ಜುಲೈ3ರಿಂದ ಶುರುವಾಗಲಿರುವ ಅಮರನಾಥ ಯಾತ್ರೆಗಾಗಿ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಿರುವುದಾಗಿ ಜಮ್ಮು–ಕಾಶ್ಮೀರ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಲಖನ್‌ಪುರದಿಂದ ಬನಿಹಾಲ್‌ವರೆಗೆ ಒಟ್ಟು 106 ವಸತಿ ಕೇಂದ್ರಗಳನ್ನು ನಿರ್ಮಿಸಲಾಗಿದ್ದು, ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಸಮುದಾಯ ಅಡುಗೆಮನೆಗಳನ್ನೂ ಸ್ಥಾಪಿಸಲಾಗಿದೆ ಎಂದಿದ್ದಾರೆ. ಅಲ್ಲದೇ, ವಸತಿ ವ್ಯವಸ್ಥೆ ಕುರಿತಂತೆ ಯಾತ್ರಾರ್ಥಿಗಳಿಗೆ ಮಾಹಿತಿ ನೀಡಲು ಜಮ್ಮುವಿನಲ್ಲಿ ಬೋರ್ಡಿಂಗ್ ಹಾಗೂ ಲಾಡ್ಜಿಂಗ್ ಕೇಂದ್ರವನ್ನೂ ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.