ADVERTISEMENT

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪಹಾಲ್ಗಂ ಮತ್ತು ಬಾಲ್‌ಟಾಲ್‌ ಎರಡೂ ಮಾರ್ಗಗಳಿಂದ ಯಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 14:46 IST
Last Updated 14 ಜುಲೈ 2022, 14:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಕಾಶ್ಮೀರದಲ್ಲಿ ತೀವ್ರ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಸೃಷ್ಟಿಯಾದ ಕಾರಣದಿಂದ ಗುರುವಾರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಹಾಲ್ಗಂ ಮತ್ತು ಬಾಲ್‌ಟಾಲ್‌ ಎರಡೂ ಮಾರ್ಗಗಳಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹವಾಮಾನ ಸುಧಾರಣೆ ಬಳಿಕ ಮತ್ತೆ ಯಾತ್ರೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಜುಲೈ 8ರಂದು ಅಮರನಾಥದಲ್ಲಿ ಮೇಘಸ್ಫೋಟಗೊಂಡು 16 ಜನರು ಮೃತಪಟ್ಟ ಬಳಿಕ ಯಾತ್ರೆಯನ್ನು ಮೂರು ದಿನ ಸ್ಥಗಿತಗೊಳಿಸಲಾಗಿತ್ತು. ಸೋಮವಾರದಿಂದ ಪಹಾಲ್ಗಂ ಮಾರ್ಗದ ಮೂಲಕ, ಮಂಗಳವಾರದಿಂದ ಬಾಲ್‌ಟಾಲ್‌ ಮಾರ್ಗದ ಮೂಲಕ ಯಾತ್ರೆಗೆ ಅವಕಾಶ ನೀಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.