ಜಮ್ಮು: ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
ಇದನ್ನೂ ಓದಿ:ಮಳೆ ತೀವ್ರ: ಭೂಕುಸಿತ, ಜಲಾಶಯಗಳ ನೀರಿನ ಮಟ್ಟ ಏರಿಕೆ
ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು.
ಈಗ ತೀರ್ಥಯಾತ್ರೆ ಪುನರಾರಂಭವಾಗಿದ್ದು, ಅಮರನಾಥ ಯಾತ್ರಿಕರ ಹೊಸ ಬ್ಯಾಚ್ ಜಮ್ಮುವಿನ ಮೂಲ ಶಿಬಿರದಿಂದ ತೆರಳಲು ಪ್ರಾರಂಭಿಸಿವೆ.
ಜುಲೈ 8ರಂದು ಪವಿತ್ರ ಗುಹೆಯ ಸಮೀಪ ಉಂಟಾದ ದಿಢೀರ್ ಪ್ರವಾಹದಿಂದಾಗಿ ಶಿಬಿರಗಳಲ್ಲಿ ತಂಗಿದ್ದ ಯಾತ್ರಿಕರಲ್ಲಿ 16 ಜನರು ಮೃತಪಟ್ಟು, ಸುಮಾರು 40 ಮಂದಿ ನಾಪತ್ತೆಯಾಗಿದ್ದಾರೆ.
ಅಮರನಾಥ ಕ್ಷೇತ್ರದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಆದರೆ ಬದುಕುಳಿಯುವ ಸಾಧ್ಯತೆ ಕ್ಷೀಣವಾಗಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.