ಬೆಂಗಳೂರು: ನವದೆಹಲಿಯಲ್ಲಿ ಅಮೆಜಾನ್ ಹೆಸರಿನಲ್ಲಿ ನಡೆಸಲಾಗುತ್ತಿದ್ದ ನಕಲಿ ಕಾಲ್ ಸೆಂಟರ್ ಅನ್ನು ಪೊಲೀಸರು ಪತ್ತೆ ಹಚ್ಚಿ 26 ಮಂದಿಯನ್ನು ಬಂಧಿಸಿದ್ದಾರೆ.
ಅಮೆಜಾನ್ ಗ್ರಾಹಕ ಸೇವಾ ಕೇಂದ್ರದ ಹೆಸರಿನಲ್ಲಿ ಸ್ಥಾಪಿಸಲಾಗಿದ್ದ ಕಾಲ್ ಸೆಂಟರ್ ಮೂಲಕ ಅಮೆರಿಕದ ನಿವಾಸಿಗಳಿಗೆ ₹4 ಕೋಟಿಗೂ ಅಧಿಕ ಮೊತ್ತವನ್ನು ವಂಚಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು, ಸೋಮವಾರ ರಾತ್ರಿ ನಕಲಿ ಕಾಲ್ ಸೆಂಟರ್‌ಗೆ ತೆರಳಿ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ದೆಹಲಿಯ ಸುಲ್ತಾನ್‌ಪುರ ಪ್ರದೇಶದಲ್ಲಿ ನಕಲಿ ಕಾಲ್ ಸೆಂಟರ್ ಕಾರ್ಯಾಚರಿಸುತ್ತಿತ್ತು.
ಅಮೆರಿಕದಲ್ಲಿನ ಅಮೆಜಾನ್ ಗ್ರಾಹಕರಿಗೆ ಕರೆ ಮಾಡುತ್ತಿದ್ದ ವಂಚಕರು, ಅಮೆಜಾನ್ ಐಡಿ ಹ್ಯಾಕ್ ಆಗಿದೆ ಎಂದು ಹೇಳಿ, ಅವರಿಂದ ಹಣ ಲಪಟಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.