ADVERTISEMENT

ಅಂಬೇಡ್ಕರ್ ಪ್ರತಿಮೆಗೆ ಹಾನಿ: ದೂರು ದಾಖಲು

ಪಿಟಿಐ
Published 26 ನವೆಂಬರ್ 2025, 12:44 IST
Last Updated 26 ನವೆಂಬರ್ 2025, 12:44 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

(ಸಾಂದರ್ಭಿಕ ಚಿತ್ರ)

ಸಂತ ಕಬೀರ್ ನಗರ (ಉತ್ತರ ಪ್ರದೇಶ): ಇಲ್ಲಿನ ಹಳ್ಳಿಯೊಂದರಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಹಾನಿಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ADVERTISEMENT

ಬೆಹಲರ್‌ ಪ್ರದೇಶದ ಮೈನಪುರಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥ ಗಂಗಾರಾಮ್‌ ಎಂಬುವರು ಈ ಕುರಿತು ದೂರು ದಾಖಲಿಸಿದ್ದಾರೆ.

ಗ್ರಾಮಸ್ಥರು, ಪ್ರತಿಮೆಯು ಮೂಲ ಸ್ಥಳದಲ್ಲಿ ಇಲ್ಲದಿರುವುದನ್ನು ಗಮನಿಸಿ ಹುಡುಕಾಟ ನಡೆಸಿದಾಗ, ಹಾನಿಯಾದ ಸ್ಥಿತಿಯಲ್ಲಿ ಪ್ರತಿಮೆ ಪತ್ತೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಶೀಘ್ರವೇ ಹೊಸ ಪ್ರತಿಮೆ ನಿರ್ಮಿಸಲಾಗುವುದು’ ಎಂದು ಬೆಲಹರ್‌ ಠಾಣಾಧಿಕಾರಿ ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.