ADVERTISEMENT

ಅಪರಿಚಿತರಿಂದ ಅಂಬೇಡ್ಕರ್‌ ಪ್ರತಿಮೆ ನಾಶ: ಗ್ರಾಮದಲ್ಲಿ ಪೊಲೀಸ್‌ ಬಂದೋಬಸ್ತ್‌

ಪಿಟಿಐ
Published 27 ಜನವರಿ 2026, 11:33 IST
Last Updated 27 ಜನವರಿ 2026, 11:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸೋನ್‌ಭದ್ರ (ಉತ್ತರಪ್ರದೇಶ): ಇಲ್ಲಿನ ರಾಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಸಿಕಾರ್‌ವಾರ್‌ ಗ್ರಾಮದಲ್ಲಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

‘ಗ್ರಾಮದ ಪಂಚಾಯತ್‌ ಕಟ್ಟಡದ ಸಮೀಪದಲ್ಲಿಯೇ ಘಟನೆ ನಡೆದಿದೆ’ ಎಂದು ವೃತ್ತ ಠಾಣಾಧಿಕಾರಿ ರಾಜ್‌ ಸೊಂಕಾರ್‌ ತಿಳಿಸಿದ್ದಾರೆ.

ADVERTISEMENT

‘ಘಟನೆ ನಡೆದಿರುವ ಕುರಿತು ಮಂಗಳವಾರ ಬೆಳಿಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಗ್ರಾಮಕ್ಕೆ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

‘ಧ್ವಂಸಗೊಂಡ ಜಾಗದಲ್ಲಿಯೇ ಹೊಸ ಪ್ರತಿಮೆ ನಿರ್ಮಾಣಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.