
ಆಂಬುಲೆನ್ಸ್ (ಪ್ರಾತಿನಿಧಿಕ ಚಿತ್ರ)
ಅಹಮದಾಬಾದ್: ಗುಜರಾತ್‌ನ ಅರವಲ್ಲಿ ಜಿಲ್ಲೆಯ ಮೊಡಾಸಾ ನಗರದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನವಜಾತ ಶಿಶು, ವೈದ್ಯರು ಸೇರಿ ನಾಲ್ವರು ಸಜೀವ ದಹನಗೊಂಡಿದ್ದಾರೆ.
ಮೊಡಾಸಾದ ಆಸ್ಪತ್ರೆಯಲ್ಲಿ ಜನನವಾಗಿದ್ದ ಶಿಶುವಿನ ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಸೋಮವಾರ ತಡರಾತ್ರಿ ಮೊಡಾಸಾ– ಧನ್ಸುರಾ ಮಾರ್ಗದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಆಂಬುಲೆನ್ಸ್‌ನಲ್ಲಿ ಶಿಶು, ತಂದೆ ಜಿಗ್ನೇಶ್ ಮೋಚಿ (38), ವೈದ್ಯ ಡಾ. ಶಾಂತಿಲಾಲ್ ರೆಂತಿಯಾ (30), ನರ್ಸ್ ಭುರಿಬೆನ್ ಮನತ್ (23) ಹಾಗೂ ಚಾಲಕ ಸೇರಿ ಇನ್ನೂ ಇಬ್ಬರಿದ್ದರು. ಚಾಲಕ ಮತ್ತು ಇತರ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಬುಲೆನ್ಸ್ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕನಿಗೆ ಅರಿವಾದ ನಂತರ ಪೆಟ್ರೋಲ್ ಪಂಪ್ ಬಳಿ ಆಂಬುಲೆನ್ಸ್ ನಿಧಾನವಾಗಿ ಚಲಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯ ಕುರಿತು ತನಿಖೆ ನಡೆಸಲು ಮತ್ತು ದುರಂತಕ್ಕೆ ಕಾರಣವನ್ನು ಪತ್ತೆಮಾಡಲು ವಿಧಿವಿಜ್ಞಾನ ತಜ್ಞರನ್ನು ಕರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಹರ ಸಿನ್ಹಾ ಜಡೇಜಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.