ನವದೆಹಲಿ: ಆಂಬುಲೆನ್ಸ್‌ಗಳಲ್ಲಿ ಎಲ್ಲ ಸಮಯದಲ್ಲೂ ಜೀವರಕ್ಷಕ ಸೌಲಭ್ಯಗಳನ್ನು ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ನಿಯಮಗಳ ಚೌಕಟ್ಟನ್ನು ಜಾರಿಗೆ ತರಲು ಮತ್ತು ಕಾರ್ಯಗತಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿದೆ.
ವಾಸ್ತವತೆ ಮತ್ತು ಅಸ್ತಿತ್ವದಲ್ಲಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳ (ಎಸ್‌ಒಪಿ) ನಡುವಿನ ಅಂತರವನ್ನು ಗುರುತಿಸಲು ಆಂಬುಲೆನ್ಸ್‌ಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ನಿಯಂತ್ರಣದ ಪ್ರಸ್ತುತ ವಾಸ್ತವಿಕ ಸ್ಥಿತಿ ಪರಿಶೀಲಿಸಲು ಸ್ವತಂತ್ರ ಸಮಿತಿ ರಚಿಸುವಂತೆ ನಿರ್ದೇಶನ ಕೋರಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ನೋಟಿಸ್‌ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಅ.10ರಂದು ಆದೇಶಿಸಿದೆ.
ಕೇಂದ್ರ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.