ಸಾಂದರ್ಭಿಕ ಚಿತ್ರ
ಅಮೇಠಿ: 13 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಅದನ್ನು ವಿಡಿಯೊ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಅಮೇಠಿಯಲ್ಲಿ ನಡೆದಿದೆ.
‘ಇಲ್ಲಿನ ಬಜಾರ್ ಶುಕುಲ್ ಪ್ರದೇಶ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದ ವ್ಯಕ್ತಿಯು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಕೃತ್ಯವನ್ನು ವಿಡಿಯೊ ಮಾಡಿದ್ದನು. ಈ ಕುರಿತು ಯಾರಿಗಾದರೂ ತಿಳಿಸಿದರೆ, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ, ಹತ್ಯೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದನು. ಆದರೂ ಮನೆಗೆ ಹಿಂತಿರುಗಿದ ಬಳಿಕ ಬಾಲಕಿ ನಡೆದ ಘಟನೆಯನ್ನು ತಾಯಿಗೆ ವಿವರಿಸಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.
ಮರುದಿನವೇ ಬಾಲಕಿಯ ತಂದೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
‘ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಠಾಣಾಧಿಕಾರಿ ಅಭಿನೇಶ್ ಕುಮಾರ್ ತಿಳಿಸಿದ್ದಾರೆ.
‘ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.