ADVERTISEMENT

ಗಡಿ ಸಂಘರ್ಷ | ಯಾವುದೇ ಪರಿಸ್ಥಿತಿಗೆ ಸಜ್ಜಾಗಿರುವಂತೆ ಸೇನಾ ಮುಖ್ಯಸ್ಥರ ಸೂಚನೆ

ಏಜೆನ್ಸೀಸ್
Published 7 ಆಗಸ್ಟ್ 2020, 15:25 IST
Last Updated 7 ಆಗಸ್ಟ್ 2020, 15:25 IST
ಗಾಲ್ವನ್‌ ಕಣಿವೆ
ಗಾಲ್ವನ್‌ ಕಣಿವೆ   
ನವದೆಹಲಿ: ಚೀನಾದೊಂದಿಗಿನ ಗಡಿ ಸಂಘರ್ಷ ಮುಂದುವರಿದಿದ್ದು, ಯಾವುದೇ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಿ ಎಂದು ಕಮಾಂಡರ್‌ಗಳಿಗೆ ಭಾರತೀಯ ಸೇನೆಯ ಮುಖ್ಯಸ್ಥ ಮನೋಜ್‌ ಮುಕುಂದ್‌ ನರವಾಣೆ ಸೂಚಿಸಿದ್ದಾರೆ.
ಅರುಣಾಚಲ ಪ್ರದೇಶದ ತೇಜ್‌ಪುರ ಸೇನಾ ನೆಲೆಗೆ ಭೇಟಿ ನೀಡಿದ್ದ ವೇಳೆ ಈ ರೀತಿ ಹೇಳಿದ್ದಾರೆ.‘ಸಂಭವನೀಯ ಪರಿಸ್ಥಿತಿಗೆಸಜ್ಜಾಗಿರುವಂತೆ ಸೇನೆಯ ಮುಖ್ಯಸ್ಥರು ಕಮಾಂಡರ್‌ಗಳಿಗೆ ಸೂಚಿಸಿದ್ದಾರೆ ಮತ್ತು ಉನ್ನತ ಮಟ್ಟದ ಕಾರ್ಯಾಚರಣೆಯನ್ನು ಮುಂದುವರಿಸುವಂತೆ ತಿಳಿಸಿದ್ದಾರೆ’ ಎಂದು ಸೇನೆಯ ಮೂಲಗಳು ತಿಳಿಸಿವೆ.
ಗಡಿ ಪ್ರದೇಶಕ್ಕೆಎರಡು ದಿನಗಳ ಭೇಟಿ ಕೈಗೊಂಡಿರುವ ನರವಾಣೆ ಅವರಿಗೆ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಭಾರತ–ಚೀನಾ ಸೇನೆ ನಿಯೋಜನೆ ಬಗ್ಗೆ ಮಾಹಿತಿ ನೀಡಲಾಯಿತು.
ಚೀನಾ ಸೇನೆಯು ಯುದ್ಧಕ್ಕಾಗಿ ಯೋಜಿಸಿರುವಂತೆಗಡಿಯಲ್ಲಿ ನಾಲ್ಕೈದು ಸಶಸ್ತ್ರ ಬ್ರಿಗೇಡ್‌ಗಳನ್ನು ನಿರ್ಮಿಸಿದೆ.ಪೂರ್ವ ಲಡಾಖ್‌ನ ಎಲ್‌ಎಸಿ ಬಳಿ ಭಾರಿ ಪ್ರಮಾಣದಲ್ಲಿ ಸೈನಿಕರನ್ನು ನಿಯೋಜಿಸಿದೆ. ಇದನ್ನು ನಿಭಾಯಿಸಲು ಭಾರತೀಯ ಸೇನೆಯು 40 ಸಾವಿರ ಸೈನಿಕರನ್ನು ನಿಯೋಜಿಸಿದೆ.ಚೀನಾದ ಸೇನೆಯು ಉತ್ತರಾಖಂಡ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿಯೂಸೇನಾ ಪಡೆಗಳನ್ನು ನಿಯೋಜಿಸಿದೆ.
ಗಡಿಯಿಂದ ತನ್ನ ಸೇನೆಯನ್ನು ವಾಪಸ್‌ ಕರೆಸಿಕೊಳ್ಳಲು ಕಮಾಂಡರ್‌ಗಳ ಮಟ್ಟದ ಮಾತುಕತೆ ವೇಳೆ ಚೀನಾ ನಿರಾಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.