ADVERTISEMENT

ಕರ್ನಾಟಕದಲ್ಲಿ 61 ಸೇರಿದಂತೆ ದೇಶದಲ್ಲಿ ಎಕ್ಸ್‌ಬಿಬಿ1.16 ತಳಿಯ 349 ಪ್ರಕರಣ ಪತ್ತೆ

ಪಿಟಿಐ
Published 23 ಮಾರ್ಚ್ 2023, 10:47 IST
Last Updated 23 ಮಾರ್ಚ್ 2023, 10:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ 349 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆಯ (INSACOG) ಅಂಕಿಅಂಶ ತಿಳಿಸಿದೆ.

ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19ರ ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ ಪ್ರಕರಣಗಳು ಪತ್ತೆಯಾಗಿದೆ. ಇದು ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಗರಿಷ್ಠ 105, ತೆಲಂಗಾಣದಲ್ಲಿ 93, ಕರ್ನಾಟಕದಲ್ಲಿ 61, ಗುಜರಾತ್‌ನಲ್ಲಿ 54
ಎಕ್ಸ್‌ಬಿಬಿ 1.16 ತಳಿಯ ಪ್ರಕರಣ ಪತ್ತೆಯಾಗಿವೆ.

ADVERTISEMENT

ಜನವರಿಯಲ್ಲಿ ದೇಶದ ಮೊದಲ ಎಕ್ಸ್‌ಬಿಬಿ 1.16 ತಳಿಯ ಪ್ರಕರಣ ಪತ್ತೆಯಾಗಿತ್ತು. ಫೆಬ್ರುವರಿಯಲ್ಲಿ ಈ ಸಂಖ್ಯೆ 140ಕ್ಕೆ ಏರಿಕೆಯಾಗಿತ್ತು.

ದೇಶದಲ್ಲಿ ಗುರುವಾರ ಹೊಸದಾಗಿ 1,300 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.