ನವದೆಹಲಿ:ಗೃಹ ಸಚಿವ ಅಮಿತ್ ಶಾ ಅವರು ಕಳೆದ ವಾರ ಆಸ್ಪತ್ರೆಗೆ ದಾಖಲಾದ ನಂತರ ಅವರಿಗೆ ಹೊಸದಾಗಿ ಕೋವಿಡ್ ಪರೀಕ್ಷೆ ನಡೆಸಿಲ್ಲ ಎಂದು ಗೃಹ ಸಚಿವಾಲಯ ಭಾನುವಾರ ಹೇಳಿದೆ.
ಸಚಿವ ಶಾ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ವರದಿ ನೆಗೆಟಿವ್ ಬಂದಿದೆ. ಅವರನ್ನು ಸೋಮವಾರ ಮನೆಗೆ ಕಳಿಸಲಾಗುತ್ತದೆ ಎಂಬ ವರದಿಗಳು ಹರಿದಾಡಿದ ಕಾರಣ ಸಚಿವಾಲಯ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಶಾ ಅವರಿಗೆ ಕೋವಿಡ್ ಇರುವುದು ದೃಢಪಟ್ಟ ಕಾರಣ ಆಗಸ್ಟ್ 2ರಂದು ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.