ನವದೆಹಲಿ: ಕತಾರ್ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಎರಡು ದಿನಗಳ ಭೇಟಿಗಾಗಿ ಇಂದು(ಫೆ.17) ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಈ ವೇಳೆ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ದಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದೆ.
ಅಮೀರ್ ಶೇಖ್ ಅವರ ಭೇಟಿಯು ನಮ್ಮ ಬಹುಮುಖಿ ಪಾಲುದಾರಿಕೆಯ ವೇಗವನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದಿದೆ.
ಸಚಿವರು, ಹಿರಿಯ ಅಧಿಕಾರಿಗಳು ಮತ್ತು ವ್ಯಾಪಾರ ನಿಯೋಗ ಸೇರಿದಂತೆ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಮಾತುಕತೆ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.