ADVERTISEMENT

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಕಾರ್ಯದರ್ಶಿಯಾಗಿ ಅಮಿತ್‌ ಖರೆ ನೇಮಕ

ಪಿಟಿಐ
Published 14 ಸೆಪ್ಟೆಂಬರ್ 2025, 10:58 IST
Last Updated 14 ಸೆಪ್ಟೆಂಬರ್ 2025, 10:58 IST
<div class="paragraphs"><p>ಅಮಿತ್‌&nbsp;ಖರೆ</p></div>

ಅಮಿತ್‌ ಖರೆ

   

ಪಿಟಿಐ ಚಿತ್ರ

ನವದೆಹಲಿ: ನೂತನ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕಗೊಂಡಿದ್ದಾರೆ.

ADVERTISEMENT

ಖರೆ ಅವರು 2021ರ ಅ.12 ರಿಂದ ಎರಡು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರೆಗೆ ಸಲಹೆಗಾರರಾಗಿದ್ದರು.

ಖರೆ ಅವರು ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಅಧಿಕಾರವಹಿಸಿಕೊಂಡ ಬಳಿಕ ಮೂರು ವರ್ಷಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜಾರ್ಖಂಡ್‌ ಕೇಡರ್‌ನ 1985ರ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿದ್ದ ಖರೆ ಅವರು ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ 2020' ಅನ್ನು ಮುನ್ನಡೆಸಿದ ಹೆಗ್ಗಳಿಕೆ ಖರೆ ಅವರದ್ದು. ಡಿಜಿಟಲ್‌ ಮಾಧ್ಯಮ ನಿಯಂತ್ರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಪ್ರಮುಖ ಬದಲಾವಣೆಗಳನ್ನು ತರುವಲ್ಲಿ ಹಾಗೂ ಬಿಹಾರದ ಮೇವು ಹಗರಣವನ್ನು ಬಯಲಿಗೆಳೆಯುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.