ಮುಂಬೈ : ಮೂರು ಬಾರಿಯ ಶಾಸಕ ಅಮಿತ್ ಸತಾಮ್ ಅವರನ್ನು ಪಕ್ಷದ ಮುಂಬೈ ಘಟಕದ ಅಧ್ಯಕ್ಷರಾಗಿ ಬಿಜೆಪಿ ನೇಮಕ ಮಾಡಿದೆ.
ಈ ಮೊದಲು ಮುಂಬೈ ಘಟಕದ ಬಿಜೆಪಿ ಅಧ್ಯಕ್ಷರಾಗಿ ಆಶಿಶ್ ಶಾಲರ್ ಅವರ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರ ಜಾಗಕ್ಕೆ ರಾಜ್ಯ ಸಂಸ್ಕೃತಿ ವ್ಯವಹಾರಗಳ ಮಂತ್ರಿಯಾದ ಅಮೀತ್ ಸತಾಮ್ (49) ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಬಿಜೆಪಿ ಅಧ್ಯಕ್ಷ ರವೀಂದ್ರ ಚವಾಣ್ ಅಧಿಕೃತವಾಗಿದೆ ಘೋಷಿಸಿದ್ದಾರೆ.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹಾಗೂ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುವ ಮುನ್ನ ಬಿಜೆಪಿಯು ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.
ಸತಾಮ್ ಅವರು ಹಲವು ಜನಪರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. ದಿಶಾ ಸಾಲಿಯಾನ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಗಳನ್ನು ಮುನ್ನೆಲೆಗೆ ತರುವ ಮೂಲಕ ಶಿವಸೇನೆಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.
ಮಾಜಿ ಅಧ್ಯಕ್ಷ ಶೇಲಾರ್‌ರವರನ್ನು 2022 ರಲ್ಲಿ ಮುಂಬೈ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇವರು 2024ರ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ವೇಳೆ ಪಕ್ಷವನ್ನು ಮುನ್ನೆಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.