ಅಮಿತ್ ಶಾ
– ಪಿಟಿಐ ಚಿತ್ರ
ಗುವಾಹಟಿ: ಮತಬ್ಯಾಂಕ್‌ಗಾಗಿ ಬಾಂಗ್ಲಾದೇಶದಿಂದ ಒಳನುಸುಳುವಿಕೆಗೆ ಕಾಂಗ್ರೆಸ್ ಪ್ರೋತ್ಸಾಹ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಅಸ್ಸಾಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಳನುಸುಳುವಿಕೆ ಸಮಸ್ಯೆಗೆ ಕಾಂಗ್ರೆಸ್ ಕಾರಣ. ಮತಬ್ಯಾಂಕ್‌ಗಾಗಿ ಅದು ಒಳನುಸುಳುಕೋರರನ್ನು ಪ್ರೋತ್ಸಾಹಿಸಿತು ಎಂದು ಟೀಕಿಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ, ಒಳನುಸುಳುವಿಕೆಗೆ ಅವಕಾಶ ನೀಡದ ಮತ್ತು ರಾಜ್ಯದ ಅಭಿವೃದ್ಧಿ ಪರವಾಗಿ ಕೆಲಸ ಮಾಡುವ ಸರ್ಕಾರವನ್ನು ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.
'ರಾಜ್ಯದಲ್ಲಿ ಕಳೆದ 10 ವರ್ಷಗಳ ಹಾಗೂ ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ಆಡಳಿತದಲ್ಲಿ ಅಸ್ಸಾಂ ಪ್ರಗತಿ ಸಾಧಿಸಿದೆ. ಇನ್ನೂ 5 ವರ್ಷ ಅವಕಾಶ ನೀಡಿ. ಪ್ರತಿಯೊಬ್ಬ ಒಳನುಸುಳುಕೋರನನ್ನು ಗುರುತಿಸಿ ವಾಪಸ್ ಕಳುಹಿಸಲಾಗುವುದು' ಎಂದು ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.