ನವದೆಹಲಿ: ಬಳಲಿಕೆ ಮತ್ತು ಮೈಕೈ ನೋವಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಕಳೆದ ನಾಲ್ಕು ದಿನಗಳಿಂದ ಬಳಕೆ ಹಾಗೂ ಮೈಕೈ ನೋವು ಇರುವುದಾಗಿ ಹೇಳಿ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಅರೋಗ್ಯವಾಗಿದ್ದು ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.