ADVERTISEMENT

ಬೋಡೊಲ್ಯಾಂಡ್: ಮಹತ್ವದ ಒಪ್ಪಂದಕ್ಕೆ ಕೇಂದ್ರ ಸಹಿ

ಪಿಟಿಐ
Published 27 ಜನವರಿ 2020, 14:21 IST
Last Updated 27 ಜನವರಿ 2020, 14:21 IST
ಬೋಡೊ ಪ್ರತಿನಿಧಿಗಳೊಂದಿಗೆ ಅಮಿತ್ ಶಾ
ಬೋಡೊ ಪ್ರತಿನಿಧಿಗಳೊಂದಿಗೆ ಅಮಿತ್ ಶಾ    

ನವದೆಹಲಿ:ಅಸ್ಸಾಂನ ಉಗ್ರಗಾಮಿ ಗುಂಪುಗಳಲ್ಲಿ ಒಂದಾದ ನ್ಯಾಷನಲ್‌ ಡೆಮಾಕ್ರಟಿಕ್‌ ಫ್ರಂಟ್‌ ಆಫ್ ಬೋಡೊಲ್ಯಾಂಡ್‌ (ಎನ್‌ಡಿಎಫ್‌ಬಿ)ನೊಂದಿಗೆ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದು ಆ ಭಾಗಕ್ಕೆ ಆರ್ಥಿಕ ಹಾಗೂ ರಾಜಕೀಯ ಲಾಭ ತಂದುಕೊಡುವ ನಿರೀಕ್ಷೆ ಇದೆ.

ಬೋಡೊಲ್ಯಾಂಡ್ ಪ್ರತ್ಯೇಕ ರಾಜ್ಯಕ್ಕಾಗಿ ಚಳವಳಿ ನಡೆಸುತ್ತಿರುವ ಆಲ್ ಬೋಡೊ ವಿದ್ಯಾರ್ಥಿ ಸಂಘ (ಎಬಿಎಸ್‌ಯು) ಸಹ ಒಪ್ಪಂದಕ್ಕೆ ಸಹಿ ಹಾಕಿದೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಸಮ್ಮುಖದಲ್ಲಿ ನಡೆದ ಈ ತ್ರಿಪಕ್ಷೀಯ ಒಪ್ಪಂದದ ಸಂದರ್ಭದಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ್‌, ಎನ್‌ಡಿಎಫ್‌ಬಿ, ಎಬಿಎಸ್‌ಯುನ ಹಿರಿಯ ನಾಯಕರು ಹಾಗೂ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಸತ್ಯೇಂದ್ರ ಗರ್ಗ್‌ ಹಾಗೂ ಅಸ್ಸಾಂ ಮುಖ್ಯಕಾರ್ಯದರ್ಶಿ ಸಂಜಯ್‌ಕುಮಾರ್ ಹಾಜರಿದ್ದರು.

ADVERTISEMENT

‌ಬೋಡೊ ಸಮಸ್ಯೆಗೆ ಸಮಗ್ರ ಪರಿಹಾರ ನೀಡುವ ಸಂಬಂಧ ನಡೆದ ಈ ಒಪ್ಪಂದವು ಐತಿಹಾಸಿಕ ದಾಖಲೆ ಎಂದು ಕೇಂದ್ರದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.