ADVERTISEMENT

ಅಮಿತ್ ಶಾ ನೇತೃತ್ವದಲ್ಲಿ ತುರ್ತುಸಭೆ

ಪಿಟಿಐ
Published 15 ನವೆಂಬರ್ 2020, 20:45 IST
Last Updated 15 ನವೆಂಬರ್ 2020, 20:45 IST

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್‌ ಪ್ರಕಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಜೆ ತುರ್ತು ಸಭೆ ನಡೆಸಿ ಪರಿಸ್ಥಿತಿಯ ವಿವರ ಪಡೆದರು.

ತುರ್ತು ನಿಗಾ ಘಟಕದ (ಐಸಿಯು) ಹಾಸಿಗೆಗಳನ್ನು ಒದಗಿಸುವುದು, ಆರ್‌ಟಿ–ಪಿಸಿಆರ್ ತಪಾಸಣೆ ಸಂಖ್ಯೆ ಹೆಚ್ಚಿ
ಸುವುದು, ಅರೆ ಸೇನಾಪಡೆಯ ವೈದ್ಯರು ಮತ್ತು ಆರೋಗ್ಯ ಸೇವೆ ಸಿಬ್ಬಂದಿ ಸೇವೆಯನ್ನು ಒದಗಿಸುವುದು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ತಿಳಿಯಲು ವಿಶೇಷ ತಂಡ ರಚಿಸಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. ದೆಹಲಿ ಲೆಫ್ಟಿನಂಟ್ ಗವರ್ನರ್ ಅನಿಲ್ ಬೈಜಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT