ADVERTISEMENT

ಜಮ್ಮು-ಕಾಶ್ಮೀರ: ಉನ್ನತ ಮಟ್ಟದ ಭದ್ರತಾ ಪರಾಮರ್ಶೆ ಸಭೆ ನಡೆಸಿದ ಅಮಿತ್ ಶಾ

ಐಎಎನ್ಎಸ್
Published 23 ಅಕ್ಟೋಬರ್ 2021, 12:18 IST
Last Updated 23 ಅಕ್ಟೋಬರ್ 2021, 12:18 IST
ಅಮಿತ್ ಶಾ ಅವರನ್ನು ಸ್ವಾಗತಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ – ಪಿಟಿಐ ಚಿತ್ರ
ಅಮಿತ್ ಶಾ ಅವರನ್ನು ಸ್ವಾಗತಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ – ಪಿಟಿಐ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಉನ್ನತ ಮಟ್ಟದ ಭದ್ರತಾ ಪರಾಮರ್ಶೆ ಸಭೆ ನಡೆಸಿದ್ದಾರೆ.

ಕಾಶ್ಮೀರದಲ್ಲಿ 15 ದಿನಗಳ ಅವಧಿಯಲ್ಲಿ 11 ಮಂದಿ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಬೆನ್ನಲ್ಲೇ ಗೃಹ ಸಚಿವರು ಈ ಸಭೆ ನಡೆಸಿದ್ದಾರೆ. ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಮತ್ತು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ನಂತರ ಇದೇ ಮೊದಲ ಬಾರಿಗೆ ಶಾ ರಾಜ್ಯಕ್ಕೆ ಮೂರು ದಿನಗಳ ಭೇಟಿ ನೀಡಿದ್ದಾರೆ.

ರಾಜ ಭವನದಲ್ಲಿ ಸಭೆ ನಡೆಸಿದ ಶಾ, ಅಲ್ಪಸಂಖ್ಯಾತರ ಮತ್ತು ಹೊರ ರಾಜ್ಯಗಳಿಂದ ಬಂದವರ ಸುರಕ್ಷತೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ, ಅರೆಸೇನಾ ಪಡೆಗಳು, ಗುಪ್ತಚರ ಇಲಾಖೆ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳೂ ಸಭೆಯಲ್ಲಿ ಪಾಲ್ಗೊಂಡಿದ್ದರು.

ಭಯೋತ್ಪಾದನೆ ನಿಗ್ರಹಕ್ಕೆ ಭದ್ರತಾ ಪಡೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ನಾಗರಿಕರ ಹತ್ಯೆ ಬೆನ್ನಲ್ಲೇ ಕೇಂದ್ರ ಸಶಸ್ತ್ರ ಪಡೆಗಳ ಹೆಚ್ಚುವರಿ 50 ತಂಡಗಳನ್ನು ಜಮ್ಮು–ಕಾಶ್ಮೀರದಲ್ಲಿ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.