ನವದೆಹಲಿ: ಎಚ್1ಎನ್1 ಸೋಂಕಿಗೆ ಒಳಗಾಗಿ, ಚಿಕಿತ್ಸೆಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
‘ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದ’ಎಂದು ಶಾ ಅವರು ಅನಂತರ ಟ್ವೀಟ್ ಮಾಡಿದ್ದಾರೆ.
‘ಏಮ್ಸ್‌ಗೆ ದಾಖಲಾಗಿದ್ದ ಅಮಿತ್ ಶಾ ಅವರು ಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಮನೆಗೆ ಮರಳಿದ್ದಾರೆ’ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.