ADVERTISEMENT

ಗಡಿಯಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳು ಭದ್ರತೆಗೆ ಸಹಕಾರ: ಅಮೀತ್‌ ಶಾ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 11:30 IST
Last Updated 10 ಏಪ್ರಿಲ್ 2022, 11:30 IST
 ಅಮೀತ್‌ ಶಾ
ಅಮೀತ್‌ ಶಾ   

ಅಹಮದಾಬಾದ್‌: ಗಡಿಯಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳು ಭದ್ರತೆಗೆ ಸಹಕಾರವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮೀತ್‌ ಶಾ ಅವರು ಭಾನುವಾರ ತಿಳಿಸಿದ್ದಾರೆ.

ಗುಜರಾತ್‌ ರಾಜ್ಯದಲ್ಲಿ ಇಂಡೋ–ಪಾಕ್ ಗಡಿಗೆ ಹೊಂದಿಕೊಂಡಿರುವ ಬನಸ್ಕಾಂತ ಜಿಲ್ಲೆಯಲ್ಲಿ ‘ಸೀಮಾರ್ದಶನ‘ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಗಡಿಯಲ್ಲಿ ಪ್ರವಾಸೋದ್ಯಮ ಚಟುವಟಿಗೆಗಳು ನಡೆಯುವುದರಿಂದ ಉದ್ಯೋಗ ಸೃಷ್ಟಿಯಾಗುವ ಮೂಲಕ ಜನರು ದೇಶದಿಂದ ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು ತಪ್ಪುತ್ತದೆ ಎಂದರು. ಹಾಗೇ ಜನರು ಮತ್ತು ಭದ್ರತಾ ಪಡೆ ಯೋಧರ ನಡುವೆ ಉತ್ತಮ ಬಾಂಧವ್ಯ ಏರ್ಪಡುತ್ತದೆ ಎಂದು ಹೇಳಿದರು.

ADVERTISEMENT

ಸೀಮಾದರ್ಶನ ಪ್ರವಾಸೋದ್ಯಮ ಯೋಜನೆ ಆಕರ್ಷಣೀಯವಾಗಿದ್ದು ಸ್ಥಳೀಯರ ಆರ್ಥಿಕ ಪುನಶ್ಚೇತನಕ್ಕೆ ನೆರವಾಗಲಿದೆ. ಈ ಮೂಲಕ ಗಡಿ ಭಾಗದ ಜನರಿಗೆ ಭದ್ರತಾ ಪಡೆಗಳ ಯೋಧರ ಮೇಲೆ ಗೌರವ ಹೆಚ್ಚಾಗಲಿದೆ ಎಂದು ಅಮೀತ್‌ ಶಾ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಡಿ ಪ್ರದೇಶಗಳ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.