ಕೋಲ್ಕತ: ಭಯೋತ್ಪಾದನೆ ಬಗ್ಗೆ ಭಾರತವು ಸಹಿಷ್ಣುತೆ ಹೊಂದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭಾನುವಾರ ಕೋಲ್ಕತದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಹೊಸ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪೂರ್ವಭಾವಿ ರಕ್ಷಣಾ ನೀತಿಯನ್ನು ಅಭಿವೃದ್ಧಿಪಡಿಸಲಾಗಿದೆ‘ ಎಂದಿದ್ದಾರೆ.
‘ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಭಾರತವೀಗ ಅಮೆರಿಕಾ ಮತ್ತು ಇಸ್ರೇಲ್‌ನಂತಹ ದೇಶಗಳ ಸಾಲಿಗೆ ಸೇರಿದೆ‘ ಎಂದು ಶಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.