ADVERTISEMENT

ಮೋದಿ ನೇತೃತ್ವದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ಯಶಸ್ವಿಯಾಗಿ ಎದುರಿಸಿದ್ದೇವೆ: ಶಾ

ಪಿಟಿಐ
Published 22 ನವೆಂಬರ್ 2020, 1:44 IST
Last Updated 22 ನವೆಂಬರ್ 2020, 1:44 IST
ಅಮಿತ್ ಶಾ (ಪಿಟಿಐ ಚಿತ್ರ)
ಅಮಿತ್ ಶಾ (ಪಿಟಿಐ ಚಿತ್ರ)   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಕೋವಿಡ್ ಸಂಕ್ರಾಮಿಕವನ್ನು ಯಶಸ್ವಿಯಾಗಿ ಎದುರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೋವಿಡ್ ವಿರುದ್ಧ ಭಾರತವು ಮೋದಿ ನೇತೃತ್ವದಲ್ಲಿ ಒಗ್ಗೂಡಿದೆ. ಪರಿಸ್ಥಿತಿ ನಿಭಾಯಿಸುವಲ್ಲಿ ಅಭಿವೃದ್ಧಿ ಹೊಂದಿದ ದೇಶಗಳಿಗಿಂತಲೂ ಉತ್ತಮವಾಗಿ ನಮ್ಮ ದೇಶ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಪಳನಿಸ್ವಾಮಿ-ಪನ್ನೀರ್ ಸೆಲ್ವಂ ನೇತೃತ್ವದ ತಮಿಳುನಾಡು ಸರ್ಕಾರ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳನ್ನು ಪಾಲಿಸುವುದು ಕರ್ತವ್ಯವೂ ಆಗಿದೆ ಎಂದೂ ಅವರು ಹೇಳಿದ್ದಾರೆ.

ಇಡೀ ಜಗತ್ತು ಮತ್ತು ಭಾರತ ಕೋವಿಡ್ ವಿರುದ್ಧ ಹೋರಾಡುತ್ತಿವೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತವು ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸಿದೆ. ತುಲನೆ ಮಾಡಿದರೆ, ಅಭಿವೃದ್ಧಿ ಹೊಂದಿದ ದೇಶಗಳಿಗಿಂತಲೂ ಭಾರತವು ಪರಿಸ್ಥಿತಿಯನ್ನು ಉತ್ತಮವಾಗಿ ಎದುರಿಸಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರ ಮತ್ತು ಆಡಳಿತಯಂತ್ರ ಮಾತ್ರವಲ್ಲ, ಒಟ್ಟು 130 ಕೋಟಿ ಜನ ಸಾಂಕ್ರಾಮಿಕದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.