ಪಟ್ನಾ: ಮುಂಬರುವ ವಿಧಾನಸಭೆ ಚುನಾವಣೆ ಬಳಿಕವೂ ನಿತೀಶ್ ಕುಮಾರ್ ಅವರೇ ಬಿಹಾರ ಮುಖ್ಯಮಂತ್ರಿಯಾಗಿ ಮಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ ಎಂದು ನಿತೀಶ್ ಕುಮಾರ್ ಪುತ್ರ ನಿಶಾಂತ್ ಮಂಗಳವಾರ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಎನ್‌ಡಿಎ ಜಯಗಳಿಸಿದ ನಂತರ ನಿತೀಶ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದರಲ್ಲಿ ಸಂಶಯ ಬೇಡ. ಇತ್ತೀಚೆಗೆ ಭೇಟಿ ನೀಡಿದ್ದ ಅಮಿತ್ ಶಾ ಅವರು ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌದರಿ ಅವರೂ ಇದನ್ನೇ ಹೇಳಿದ್ದಾರೆ’ ಎಂದರು.
‘ನನ್ನ ತಂದೆ ಶೇ100ರಷ್ಟು ಫಿಟ್ ಆಗಿದ್ದಾರೆ. ಮತ್ತೆ 5 ವರ್ಷ ಸರ್ಕಾರ ನಡೆಸಲು ಅವರು ಸಮರ್ಥರಾಗಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.