ADVERTISEMENT

ಸಿಎಎ ಬೆಂಲಿಸಲು ಅಮಿತ್ ಶಾ ಮನವಿ

ನಿತೀಶ್‌ ನಾಯಕತ್ವದಲ್ಲೇ ಬಿಹಾರ ವಿಧಾನಸಭೆ ಚುನಾವಣೆ

ಪಿಟಿಐ
Published 16 ಜನವರಿ 2020, 19:45 IST
Last Updated 16 ಜನವರಿ 2020, 19:45 IST
ಅಮಿತ್‌ ಶಾ
ಅಮಿತ್‌ ಶಾ   

ವೈಶಾಲಿ, ಬಿಹಾರ : ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಸಹಿತ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೊಂಡ ಕ್ರಮಗಳಿಗೆ ಬಿಹಾರದ ಜನರು ಬೆಂಬಲಿಸಬೇಕು ಎಂದು ಬಿಜೆಪಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಅಮಿತ್‌ ಶಾ ಗುರುವಾರ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಎನ್‌ಡಿಎ ಮೈತ್ರಿಕೂಟದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದ ಅವರು, ಬಿಹಾರದ ವಿಧಾನಸಬೆ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ಪ್ರತಿಪಾದಿಸಿದರು.

ಸಿಎಎ ಪರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕಾಯ್ದೆ ಬಗ್ಗೆ ಅಲ್ಪಸಂಖ್ಯಾತರನ್ನು ದಾರಿತಪ್ಪಿಸಿ, ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿವೆ ಎಂದು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ADVERTISEMENT

ಯಾರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಆದರೆ ತಪ್ಪು ಮಾಹಿತಿ ಹರಡಲಾಗುತ್ತಿದ್ದು, ಇದನ್ನು ಹೋಗಲಾಡಿಸಲು ದೇಶದಾದ್ಯಂತ ರ‍್ಯಾಲಿ ಆಯೋಜಿಸಲಾಗುತ್ತಿದೆ. ಸಿಎಎ, 370ನೇ ವಿಧಿ ರದ್ದುಗೊಳಿಸಿರುವುದು ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬೆಂಲ ನೀಡಬೇಕು ಎಂದು ಕೋರಿದರು.

‘ಎನ್‌ಡಿಎ ಮೈತ್ರಿಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಿತೀಶ್‌ ಕುಮಾರ್‌ ಅವರ ನಾಯಕತ್ವದಲ್ಲಿಯೇ ಇಲ್ಲಿನ ಚುನಾವಣೆ ನಡೆಯಲಿದ್ದು, ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಸೇರಿರುವ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಅವರು ಅಧಿಕಾರಕ್ಕೆ ಬರಬಹುದು ಎಂದು ಕನಸು ಕಾಣುತ್ತಿದ್ದಾರೆ. ಆದರೆ, ಅವರ ಲಾಟಿನ್‌ ಯುಗದಿಂದ (ಆರ್‌ಜೆಡಿ ಚಿಹ್ನೆ) ಎಲ್‌ಇಡಿ ಯುಗಕ್ಕೆ ಬಿಹಾರ ಬದಲಾಗಿದೆ’ ಎಂದು ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.