ADVERTISEMENT

ಕೇರಳದಲ್ಲಿ ಏನು ತಪ್ಪಿದೆ, ಅಮಿತ್ ಶಾ ಸ್ಪಷ್ಟಪಡಿಸಲಿ: ಪಿಣರಾಯಿ ವಿಜಯನ್

ಪಿಟಿಐ
Published 13 ಫೆಬ್ರುವರಿ 2023, 5:46 IST
Last Updated 13 ಫೆಬ್ರುವರಿ 2023, 5:46 IST
   

ಕೊಟ್ಟಯಂ: ಕೇರಳ ರಾಜ್ಯದ ಕುರಿತಂತೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಮಿಕ ನುಡಿಗಳ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿ ಕಾರಿದ್ದಾರೆ.

ಕೇರಳದಲ್ಲಿ ಅವರು ಯಾವ ಅಪಾಯವನ್ನು ಅನುಭವಿಸಿದ್ದಾರೆ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಭಾನುವಾರ ಇಲ್ಲಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ)ನ ಹಿರಿಯ ನಾಯಕ ವಿಜಯನ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರನ್ನು ನಿರಂತರವಾಗಿ ಗುರಿಯಾಗಿಸಲಾಗುತ್ತಿದೆ, ಆದರೆ. ಅವರು ಎಡಪಕ್ಷದ ಆಡಳಿತವಿರುವ ಕೇರಳದಲ್ಲಿ ಶಾಂತಿಯುತವಾಗಿ ಬದುಕುತ್ತಿದ್ದಾರೆ ಎಂದು ಹೇಳಿದರು.

ADVERTISEMENT

‘ಕೇರಳದ ಪರಿಸ್ಥಿತಿ ಎಲ್ಲರಿಗೂ ತಿಳಿದಿದೆ. ಇಲ್ಲಿ ಏನು ತಪ್ಪಾಗಿದೆ ಎಂದು ಅಮಿತ್ ಶಾ ಹೇಳಬೇಕು. ಕರ್ನಾಟಕದಲ್ಲಿ ಅಲ್ಪಸಂಖ್ಯಾತರು ವ್ಯಾಪಕ ದಾಳಿಗಳನ್ನು ಎದುರಿಸಿದ್ದಾರೆ. ಆದರೆ, ಕೇರಳದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಸುರಕ್ಷಿತವಾಗಿದ್ದಾರೆ’ ಎಂದು ಅವರು ಹೇಳಿದರು.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ನಿಮ್ಮ ನೆರೆಯಲ್ಲಿ ಕೇರಳ ರಾಜ್ಯವಿದೆ ಎಂದು ಮಾರ್ಮಿಕವಾಗಿ ಹೇಳಿದ್ದರು.

ಕೇರಳದಲ್ಲಿ ಜನರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಅಂತಹ ವಾತಾವರಣ ಸೃಷ್ಟಿಸಬೇಕು ಎಂದು ಶಾ ಹೇಳಬೇಕಿತ್ತು. ನಮ್ಮ ನೆರೆ ರಾಜ್ಯ ಕರ್ನಾಟಕದಲ್ಲಿ ಮಂಗಳೂರು ಹಲವೆಡೆ ಹಲವು ಕೋಮು ಸಂಘರ್ಷಗಳು ನಡೆದಿವೆ. ಕ್ರಿಶ್ಚಿಯನ್ ಮತ್ತು ಇತರೆ ಅಲ್ಪಸಂಖ್ಯಾತ ಸಮುದಾಯಗಳು ಸಂಘ ಪರಿವಾರದಿಂದ ಹಲವು ದಾಳಿಗಳನ್ನು ಎದುರಿಸಿವೆ. ಚಿಕ್ಕಮಗಳೂರಿನ 150 ವರ್ಷಗಳ ಹಿಂದಿನ ಚರ್ಚ ಮೇಲೆ 2012ರಲ್ಲಿ ದಾಳಿ ನಡೆದಿದೆ. ಕೇರಳದಲ್ಲಿ ಅಂತಹ ಪರಿಸ್ಥಿತಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.