ADVERTISEMENT

ಬಿಹಾರ ಹಿಂಸಾಚಾರ | ಪರಿಸ್ಥಿತಿ ಅವಲೋಕಿಸಿದ ಅಮಿತ್ ಶಾ

ಪಿಟಿಐ
Published 2 ಏಪ್ರಿಲ್ 2023, 9:32 IST
Last Updated 2 ಏಪ್ರಿಲ್ 2023, 9:32 IST
   

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರೊಂದಿಗೆ ಅಮಿತ್ ಶಾ ಚರ್ಚೆ ನಡೆಸಿದ್ದು, ಈಗಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಹಾರ ಸರ್ಕಾರದ ಕೋರಿಕೆಯ ಮೇರೆಗೆ ಘರ್ಷಣೆಯನ್ನು ನಿಯಂತ್ರಿಸಲು ಹೆಚ್ಚುವರಿ ಅರೆಸೇನಾ ಪಡೆಗಳನ್ನು ಬಿಹಾರಕ್ಕೆ ರವಾನಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ADVERTISEMENT

ರಾಮನವಮಿ ನಿಮಿತ್ತ ಶೋಭಾ ಯಾತ್ರೆ ವೇಳೆ ಸಸಾರಾಮ್ ಮತ್ತು ಬಿಹಾರ ಷರೀಫ್ ಪಟ್ಟಣಗಳಲ್ಲಿ ಘರ್ಷಣೆ ಭುಗಿಲೆದ್ದಿತ್ತು. ಈ ಎರಡು ಪ್ರದೇಶಗಳಲ್ಲಿ ಶನಿವಾರದವರೆಗೆ 45 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಮನೆ, ವಾಹನ, ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮತ್ತೆ ಘರ್ಷಣೆಯ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಹಿತಕರ ಘಟನೆ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಬಿಹಾರ ಭೇಟಿ ರದ್ದುಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.