ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಕೆಲ ಹೊತ್ತಿನಲ್ಲೇ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹರಿಹಾಯ್ದಿದ್ದಾರೆ.
ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ ಎನ್ನುವಕೇಂದ್ರ ಸರ್ಕಾರದ ನಿಲುವನ್ನು ಸುಪ್ರೀಂ ತೀರ್ಪುಸಮರ್ಥಿಸಿದೆ. ಬಾಲಿಶ ಆರೋಪಗಳನ್ನು ಮಾಡಿದ ಕಾರಣ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
‘ಸತ್ಯ ಯಾವಾಗಲು ಗೆಲ್ಲುತ್ತದೆ.ರಫೇಲ್ ಪ್ರಕರಣವನ್ನುರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಅಧ್ಯಕ್ಷ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಿಂದ ಹೊರಬಂದಿದೆ. ಖರೀದಿ ಪ್ರಕ್ರಿಯೆಯಲ್ಲಿಯಾವುದೇದೋಷ ಕೋರ್ಟ್‌ಗೆ ಕಂಡಿಲ್ಲಅಥವಾ ವಾಣಿಜ್ಯ ಉದ್ದೇಶಕ್ಕಾಗಿನ ಪಕ್ಷಪಾತವನ್ನು ಗುರುತಿಸಿಲ್ಲ’ ಎಂದುಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.