ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ (ಮಾ. 21) ಬಿಡುಗಡೆ ಮಾಡಲಿದ್ದಾರೆ.
ಈ ವಿಚಾರವಾಗಿ ಮಾಹಿತಿ ನೀಡಿರುವ ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಸ್ ವಿಜಯವರ್ಗೀಯ, 'ಮಾರ್ಚ್ 21 ರಂದು ಕೇಂದ್ರ ಗೃಹ ಸಚಿವ ಅಮಿತ್ ಅವರು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಬಿಡುಗಡೆ ಸಮಾರಂಭವು ಕೋಲ್ಕತ್ತದಲ್ಲಿ ನಡೆಯಲಿದೆ' ಎಂದು ತಿಳಿಸಿದ್ದಾರೆ.
294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ. ಮೇ.02ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.