ADVERTISEMENT

ಅಮಿತಾಭ್‌ಗೆ ಜ್ವರ: ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಸಂಭವ

ಪಿಟಿಐ
Published 22 ಡಿಸೆಂಬರ್ 2019, 14:26 IST
Last Updated 22 ಡಿಸೆಂಬರ್ 2019, 14:26 IST
ಅಮಿತಾಭ್‌ ಬಚ್ಚನ್‌
ಅಮಿತಾಭ್‌ ಬಚ್ಚನ್‌   

ಮುಂಬೈ: ‘ಜ್ವರದಿಂದ ಬಳಲುತ್ತಿರುವ ಕಾರಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಸಾಧ್ಯವಾಗುತ್ತಿಲ್ಲ’ ಎಂದು ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಭಾನುವಾರ ತಿಳಿಸಿದ್ದಾರೆ.

‘ನವದೆಹಲಿಯಲ್ಲಿ ಸೋಮವಾರ ನಡೆಯುವ ಸಮಾರಂಭದಲ್ಲಿ 2018ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪಡೆಯಬೇಕಿತ್ತು. ಆದರೆ, ಜ್ವರದಿಂದ ಬಳಲುತ್ತಿರುವುದರಿಂದ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಅವರು ಟ್ವೀಟ್‌ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT