ADVERTISEMENT

75ನೇ ಸ್ವಾತಂತ್ರ್ಯೋತ್ಸವ: ಕೇಂದ್ರ ಸರ್ಕಾರದಿಂದ ‘ಅಮೃತ ಮಹೋತ್ಸವ’ಕ್ಕೆ ಸಿದ್ಧತೆ

ಮಾರ್ಚ್‌ 12ರಂದು ಸಬರಮತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ

ಪಿಟಿಐ
Published 10 ಮಾರ್ಚ್ 2021, 8:32 IST
Last Updated 10 ಮಾರ್ಚ್ 2021, 8:32 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ನಡೆಯುವ ‘ಅಮೃತ ಮಹೋತ್ಸವ’ದಲ್ಲಿ ಎಲ್ಲ ಸಂಸದರು ಮತ್ತು ಜನಪ್ರತಿನಿಧಿಗಳು ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮನವಿ ಮಾಡಿದ್ದಾರೆ.

ಬಿಜೆಪಿಯ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ದೇಶದ 75 ಸ್ಥಳಗಳಲ್ಲಿ 75 ವಾರಗಳವರೆಗೆ ಭವ್ಯ ಉತ್ಸವ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದಜೋಶಿ ಬುಧವಾರ ಇಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಬಹುತೇಕ ಒಂದು ವರ್ಷದ ಬಳಿಕ ಈ ಸಂಸದೀಯ ಪಕ್ಷದ ಸಭೆ ನಡೆದಿದೆ.

ಅಮೃತ ಮಹೋತ್ಸವಕ್ಕೆ ಮಾರ್ಚ್‌ 12ರಂದು ಗುಜರಾತಿನ ಸಬರಮತಿ ಆಶ್ರಮದಲ್ಲಿ ಚಾಲನೆ ದೊರೆಯಲಿದೆ ಎಂದು ಅವರು ಹೇಳಿದರು.

ADVERTISEMENT

ಕೋವಿಡ್‌–19ರ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಸಂಸತ್ತಿನ ಸದಸ್ಯರು ತೊಡಗಿಕೊಳ್ಳಬೇಕು. ಜನರಿಗೆ ಲಸಿಕೆ ಕೊಡಿಸಲು ನೆರವಾಗಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದರು.

ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಿ ಅವರ ಸಮರ್ಥ ಮತ್ತು ಪರಿಣಾಮಕಾರಿ ನಾಯಕತ್ವವನ್ನು ಶ್ಲಾಘಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.

ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ಪಕ್ಷವು ತನ್ನ ಹೆಜ್ಜೆಗುರುತನ್ನು ವಿಸ್ತರಿಸಿದೆ ಮತ್ತು ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಸಹಾಯ ಮಾಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.