ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಆಗಸ್ಟ್ 2023, 2:20 IST
Last Updated 17 ಆಗಸ್ಟ್ 2023, 2:20 IST
ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ
ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ   (ಚಿತ್ರ ಕೃಪೆ: Twitter/@NCS_Earthquake)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಲಘು ಭೂಕಂಪ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಸುಕಿನ ವೇಳೆ 3.49ಕ್ಕೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ.

ADVERTISEMENT

ಆಗಸ್ಟ್ 16, ಗುರುವಾರದಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ ಕಂಪನದ ಅನುಭವ ಉಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.