ADVERTISEMENT

ಮಣಿಪುರದಲ್ಲಿ ಕಂಪಿಸಿದ ಭೂಮಿ; 3.8 ತೀವ್ರತೆಯ ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮಾರ್ಚ್ 2023, 16:05 IST
Last Updated 23 ಮಾರ್ಚ್ 2023, 16:05 IST
   

ದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಸಂಜೆ 6.51ರ ಸುಮಾರಿಗೆ ಕಂಪನ ಉಂಟಾಗಿದ್ದು, ಮೊಯಿರಾಂಗ್‌ನಿಂದ 67 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಹೇಳಿದೆ.

ADVERTISEMENT

ಮಾರ್ಚ್ 21ರಂದು ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ದೆಹಲಿ ಎನ್‌ಸಿಆರ್‌ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿತ್ತು. ಬುಧವಾರವೂ ದೆಹಲಿಯಲ್ಲಿ ಕಂಪನ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.