ADVERTISEMENT

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಅಕ್ಟೋಬರ್ 2022, 9:57 IST
Last Updated 5 ಅಕ್ಟೋಬರ್ 2022, 9:57 IST
ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ. 
ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ.    

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದೆ.

ಘಟನೆಯಲ್ಲಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತವಾಂಗ್ ಬಳಿಯ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪತನಗೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ADVERTISEMENT

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪೈಲಟ್‌ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.