ADVERTISEMENT

ಕೇಂದ್ರ ಸಚಿವ ಅನಂತಕುಮಾರ್ ನಿಧನ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 2:38 IST
Last Updated 12 ನವೆಂಬರ್ 2018, 2:38 IST
   

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ (59)ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ.

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮುಂಜಾನೆ 7.30ರ ನಂತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.